ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಸುಪ್ರೀಂ ಕೋರ್ಟ್​ ಗ್ರೀನ್‌ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿಸಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, ರಾಜ್ಯಗಳ ಕಾಯ್ದೆಗಳು ಕಾನೂನುಬದ್ಧವಾಗಿ ಮಾನ್ಯವಾಗಿರುತ್ತವೆ ಎಂದು ಹೇಳಿದೆ.

ಜಲ್ಲಿಕಟ್ಟು ಜೊತೆಗೆ ಕರ್ನಾಟಕದ ಕಂಬಳ ಮತ್ತು ಮಹಾರಾಷ್ಟ್ರದ ಎತ್ತಿನ ಗಾಡಿ ಓಟದ ಸಿಂಧುತ್ವವನ್ನು ಎತ್ತಿ ಹಿಡಿದಿದ್ದು, ಈ ರಾಜ್ಯಗಳಿಗೂ ಇದೀಗ ರಿಲೀಫ್ ಸಿಕ್ಕಿದೆ. ಆದರೆ ಈ ಹಿಂದೆ ಮಾಡಲಾದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೂಡ ಸೂಚಿಸಿದೆ.

ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ಆದೇಶವನ್ನು ನೀಡಿದೆ.

ತಮಿಳುನಾಡಿನಲ್ಲಿ ಗೂಳಿ ಪಳಗಿಸುವ ಕ್ರೀಡೆಗೆ ಅನುಮತಿ ನೀಡಿರುವ ಕಾನೂನನ್ನು ಪ್ರಶ್ನಿಸಿ ಪ್ರಾಣಿ ಹಕ್ಕುಗಳ ಸಂಸ್ಥೆ ಪೆಟಾ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ ಅರ್ಜಿಗಳು ದಾಖಲಾಗಿತ್ತು.

” ಸಾವು ಇದೆ ಎಂದರೆ ಅದು ರಕ್ತಸಿಕ್ತ ಕ್ರೀಡೆ ಎಂದು ಅರ್ಥವಲ್ಲ. ಭಾಗವಹಿಸಿದ ಗೂಳಿಗಳ ಮೇಲೆ ಹತ್ತಲು ಹೋಗುವವರು ರಕ್ತ ಹರಿಸುವ ಸಲುವಾಗಿ ಭಾಗವಹಿಸುತ್ತಾರೆ ಎಂದು ನಾನು ಸೂಚಿಸುವುದಿಲ್ಲ. ಜನರು ಕೊಲ್ಲಲು ಹೋಗುವುದಿಲ್ಲ. ಪ್ರಾಣಿ, ರಕ್ತವು ಪ್ರಾಸಂಗಿಕ ವಿಷಯವಾಗಿರಬಹುದು” ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ಅಭಿಪ್ರಾಯಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!