ಸಾವರ್ಕರ್ ‘ಬ್ರಿಟಿಷರ ಸೇವಕ’ ಎಂದ ರಾಹುಲ್ ಗೆ ಸುಪ್ರೀಂ ಕೋರ್ಟ್ ಕ್ಲಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೀರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ನ್ಯಾಯಾಲಯ ಎಚ್ಚರಿಸಿದ್ದು, ಪುನರಾವರ್ತನೆಯಾದರೆ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರ ಪೀಠವು, ರಾಜಕೀಯ ನಾಯಕರಾಗಿ ಇಂತಹ ಹೇಳಿಕೆಗಳನ್ನು ಏಕೆ ನೀಡಬೇಕು? ಪ್ರಚೋದನೆ ಉದ್ದೇಶವಿಲ್ಲದಿದ್ದರೆ, ಈ ರೀತಿಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕನಿಗೆ ನ್ಯಾಯಾಲಯ ಖಡಕ್ ಆಗಿ ಸೂಚಿಸಿತು.

2022ರ ನವೆಂಬರ್ 17ರಂದು ಮಹಾರಾಷ್ಟ್ರದ ಅಕೋಲಾದಲ್ಲಿ ‘ಭಾರತ್ ಜೋಡೋ ಯಾತ್ರೆ’ ವೇಳೆ ರಾಹುಲ್ ಗಾಂಧಿ ಸಾವರ್ಕರ್ ಅವರನ್ನು ‘ಬ್ರಿಟಿಷರ ಸೇವಕ’ ಎಂದು ಕರೆದಿದ್ದಾರೆ ಎಂಬ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!