ಹೊಸದಿಗಂತ ವರದಿ, ಹುಬ್ಬಳ್ಳಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ನಿಜವಾದ ಭಾರತೀಯರಾಗಿದ್ದರೆ ಎಂಬ ಪ್ರಶ್ನೆ ಮಾಡಿರುವುದು ತಪ್ಪು. ಇದಕ್ಕೆ ನಮ್ಮ ಆಕ್ಷೇಪವಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಸುಪ್ರೀಂ ನಿಜ. ಆದರೆ ಯಾರು ಭಾರತೀಯರು ಎಂಬುವುದು ಸುಪ್ರೀಂ ಕೋರ್ಟ್ ನಿರ್ಧಾರ ಮಾಡುತ್ತದೆಯಾ? ಈ ಬಗ್ಗೆ ನಮ್ಮ ಆಕ್ಷೇಪವಿದೆ. ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಸಾರಿಗೆ ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಸರಿಪಡಿಸುತ್ತಾರೆ. ರಾಜ್ಯ ಸರ್ಕಾರ ಖಜಾನೆ ಖಾಲಿಯಾಗಿಲ್ಲ. ಸರ್ಕಾರ ಐದು ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ. ಬಿಜೆಪಿ ಅವರು ಮೊಸಳೆ ಕಣ್ಣೀರು ಹಾಕುವುದು ಹಾಗೂ ಸರ್ಕಾರ ವಿರುದ್ಧ ಹೇಳಿಕೆ ನೀಡುವುದು ಬಿಟ್ಟು, ರಾಜ್ಯಕ್ಕೆ ಬರಬೇಕಾದ ನ್ಯಾಯಯುತವಾದ ತೆರಿಗೆ ಕೇಂದ್ರದಿಂದ ಕೊಡಿಸಲಿ. ಇದರಿಂದ ರಾಜ್ಯದಲ್ಲಿ ಇನ್ನೂ ಅಭಿವೃದ್ಧಿ ಕಾರ್ಯಗಳು ಹೆಚ್ಚಾಗಲಿವೆ ಎಂದು ಹೇಳಿದರು.