ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ, ಎಐಎಡಿಎಂಕೆ ಉಚ್ಚಾಟಿತ ಮುಖಂಡ ಪಿ.ರವೀಂದ್ರನಾಥ ಅವರ ಆಯ್ಕೆ ಅಸಿಂಧು ಎಂದು ಘೋಷಿಸಿ ಮದ್ರಾಸ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ರವೀಂದ್ರನಾಥ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ದೀಪಂಕರ್ ದತ್ತ ಅವರಿದ್ದ ನ್ಯಾಯಪೀಠ , ಮದ್ರಾಸ್ ಹೈಕೋರ್ಟ್ ಜುಲೈ 6ರಂದು ನೀಡಿರುವ ಆದೇಶಕ್ಕೆ ತಡೆ ನೀಡಲಾಗಿದ್ದು, ಮುಂದಿನ ಆದೇಶದ ವರೆಗೆ ರವೀಂದ್ರನಾಥ ಅವರು ಸಂಸದರಾಗಿ ಮುಂದುವರಿಯಲಿದ್ದಾರೆ ಇಂಡಿತು ತಿಳಿಸಿದೆ.
ಇವರ ಆಯ್ಕೆಯನ್ನು ಪ್ರಶ್ನಿಸಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದ ಪಿ.ಮಿಲಾನಿ ಅವರಿಗೆನೋಟಿಸ್ ಜಾರಿ ಮಾಡಿತು.
ತಮಿಳುನಾಡಿನ ಥೇಣಿ ಲೋಕಸಭಾ ಕ್ಷೇತ್ರದಿಂದ 2019ರಲ್ಲಿ ಆಯ್ಕೆಯಾಗಿರುವ ರವೀಂದ್ರನಾಥ ಅವರು ಎಐಎಡಿಎಂಕೆಯ ಏಕೈಕ ಸಂಸದರಾಗಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಉಚ್ಚಾಟಿತ ನಾಯಕ ಒ.ಪನ್ನೀರ್‌ಸೆಲ್ವಂ ಅವರ ಪುತ್ರ.
ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ರವೀಂದ್ರನಾಥ ಅವರು ಅನೇಕ ಮಾಹಿತಿಗಳನ್ನು ಮುಚ್ಚಿಟ್ಟಿದ್ದರು. ಅವರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸೇರಿದ ಚರಾಸ್ತಿ ಮತ್ತು ಸ್ಥಿರಾಸ್ತಿಗಳು, ಹೊಣೆಗಾರಿಕೆಗಳ ಕುರಿತು ವಿವರಗಳನ್ನು ಸಲ್ಲಿಸಿರಲಿಲ್ಲ ಎಂದು ಮಿಲಾನಿ ಆರೋಪಿಸಿದ್ದರು.