ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್.ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು 10 ದಿನಗಳ ವಿಚಾರಣೆ ಬಳಿಕ ತೀರ್ಪನ್ನು ಮೇ 11ರಂದು ಕಾಯ್ದಿರಿಸಿತ್ತು.
ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಎಸ್ ರವೀಂದ್ರ ಭಟ್, ನ್ಯಾ.ಹಿಮಾ ಕೊಹ್ಲಿ, ನ್ಯಾ.ಪಿ.ಎಸ್. ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠವು ಇಂದು ತೀರ್ಪು ನೀಡಲಿದೆ.
ಈ ಹಿಂದಿನ ವಿಚಾರಣೆಗಳಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರ ಕೋರ್ಟ್‌ಗೆ ವಾದಗಳನ್ನು ಮಂಡಿಸಿದೆ.