ಬಿಬಿಸಿ ಸಾಕ್ಷ್ಯಚಿತ್ರದ ಮೇಲಿನ ಕೇಂದ್ರದ ನಿಷೇಧ ಪ್ರಕರಣ: ಸುಪ್ರೀಂಕೋರ್ಟ್​ನಲ್ಲಿ ಇಂದು ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ನೇತೃತ್ವದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ ಎಂ ಸುಂದ್ರೇಶ್ ಅವರನ್ನೊಳಗೊಂಡ ಸರ್ವೋಚ್ಚ ನ್ಯಾಯಪೀಠ ಇಂದು ವಿಚಾರಣೆ ಆಲಿಸಲಿದೆ.

ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಹಿರಿಯ ಪತ್ರಕರ್ತ ಎನ್ ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಮತ್ತು ವಕೀಲ ಎಂಎಲ್ ಶರ್ಮಾ ಅವರು ಬಿಬಿಸಿ ಸಾಕ್ಷ್ಯಚಿತ್ರವನ್ನು ಸೆನ್ಸಾರ್ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಈ ಅರ್ಜಿಯ ತುರ್ತು ವಿಚಾರಣೆ ಆಗಬೇಕೆಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮುಂದೆ ಜನವರಿ 30ರಂದು ವಕೀಲ M.L.ಶರ್ಮಾ ಪ್ರಸ್ತಾಪಿಸಿದ್ದರು. ಅಂತೆಯೇ ಇಂದು ಈ ಅರ್ಜಿಗಳ ವಿಚಾರಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!