ಮಾನನಷ್ಟ ಮೊಕದ್ದಮೆ: ಜು.21ಕ್ಕೆ ರಾಹುಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೋದಿ ಉಪನಾಮ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್‌ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿ ನೀಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಜುಲೈ 21 ರಂದು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ಸೂಚಿಸಿದೆ.

2019ರಲ್ಲಿ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು, ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು, ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ‌ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ತೀರ್ಪಿನ ವಿರುದ್ಧ ಇದೀಗ ರಾಹುಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!