ಮೋದಿ ಉಪನಾಮ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ರಾಹುಲ್ ಗಾಂಧಿ ಅರ್ಜಿ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಮೋದಿ ಉಪನಾಮ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್‌ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಜುಲೈ 21 ರಂದು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿತ್ತು. ಅದರ ಅನ್ವಯ ಇಂದು ವಿಚಾರಣೆ ನಡೆಯಲಿದೆ.

2019ರಲ್ಲಿ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು, ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ‌ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ತೀರ್ಪಿನ ವಿರುದ್ಧ ಇದೀಗ ರಾಹುಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!