ಪ್ರಾದೇಶಿಕ ಭಾಷೆಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪು: ಸಿಜೆಐ ಮಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲು ಒತ್ತು ನೀಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ.

ಇತ್ತೀಚಿನ ಸಮಾರಂಭವೊಂದರಲ್ಲಿ, ಸಿಜೆಐ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಪ್ರಾದೇಶಿಕ ಭಾಷೆಗಳಲ್ಲಿ ಎಸ್‌ಸಿ ತೀರ್ಪುಗಳು ಲಭ್ಯವಾಗುವಂತೆ ಕೆಲಸ ಮಾಡುವ ಅಗತ್ಯತೆಯ ಕುರಿತು ಮಾತನಾಡಿದರು. ಇದಕ್ಕೆ ತಂತ್ರಜ್ಞಾನವನ್ನೂ ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಇದು ಶ್ಲಾಘನೀಯ ಚಿಂತನೆಯಾಗಿದೆ, ಇದು ಅನೇಕ ಜನರಿಗೆ, ವಿಶೇಷವಾಗಿ ಯುವಕರಿಗೆ ಸಹಾಯ ಮಾಡುತ್ತದೆ ಎಂದು ಪ್ರಧಾನಿ ಮೋದಿ ಟ್ವಿಟರ್‌ ನಲ್ಲಿ ಶ್ಲಾಘಿಸಿದ್ದಾರೆ.

ಭಾರತವು ಹಲವಾರು ಭಾಷೆಗಳನ್ನು ಹೊಂದಿದೆ, ನಮ್ಮ ಸಾಂಸ್ಕೃತಿಕ ಕಂಪನ್ನು ಹೆಚ್ಚಿಸುತ್ತದೆ. ಒಬ್ಬರ ಮಾತೃ ಭಾಷೆಯಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯದಂತಹ ವಿಷಯಗಳನ್ನು ಅಧ್ಯಯನ ಮಾಡುವ ಆಯ್ಕೆಯನ್ನು ನೀಡುವುದು ಸೇರಿದಂತೆ ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಹಲವಾರು ಪ್ರಯತ್ನಗಳನ್ನು ಕೈಗೊಳ್ಳುತ್ತಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮುಂಬೈನಲ್ಲಿ ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಜೆಐ ಮಾಡಿದ ಭಾಷಣದ ಸಂಬಂಧಿತ ಕ್ಲಿಪ್ ಅನ್ನು ಕೂಡ ಈ ವೇಳೆ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!