ಸುಪ್ರೀಂ ಕೋರ್ಟ್ ವಾರ್ನಿಂಗ್: ಚುನಾವಣಾ ಬಾಂಡ್ ವಿವರ ಸಲ್ಲಿಸಿದ ಎಸ್‌ಬಿಐ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಪ್ರೀಂ ಕೋರ್ಟ್ ವಾರ್ನಿಂಗ್ ನೀಡಿದ ಬೆನ್ನಲ್ಲೇ ಎಸ್‌ಬಿಐ ಚುನಾವಣಾ ಬಾಂಡ್ ವಿವರಣೆಯನ್ನು ಚುನಾವಣಾ ಆಯೋಗಕ್ಕೆ ವಿವರ ಸಲ್ಲಿಸಿದೆ.

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಬ್ಯಾನ್ ಮಾಡಿ ತೀರ್ಪು ನೀಡಿತ್ತು. ಇದೇ ವೇಳೆ ಚುನಾವಣಾ ಬಾಂಡ್ ಖರೀದಿಸಿದವರ ಮಾಹಿತಿ ನೀಡುವಂತೆ ಕೋರ್ಟ್ ಎಸ್‌ಬಿಐ ಸೂಚಿಸಿತ್ತು. ಮಾರ್ಚ್ 6ರೊಳಗೆ ಬಾಂಡ್ ವಿವರ ಸಲ್ಲಿಸುವಂತೆ ಸೂಚಿಸಿದ್ದರೂ ಎಸ್‌ಬಿಐ ವಿಸ್ತರಣೆ ಕೇಳುವ ಮೂಲಕ ಮಾಹಿತಿ ನೀಡಲು ನಿರಾಕರಿಸಿತ್ತು. ಆದರೆ ವಾರ್ನಿಂಗ್ ನೀಡಿದ ಬೆನ್ನಲ್ಲೇ ಇದೀಗ ಎಸ್‌ಬಿಐ ಚುನಾವಣಾ ಬಾಂಡ್ ವಿವರಣೆಯನ್ನು ಚುನಾವಣಾ ಆಯೋಗಕ್ಕೆ ವಿವರ ಸಲ್ಲಿಸಿದೆ.

ಎಸ್‌ಬಿಐ ಸಲ್ಲಿಸಿದ ಚುನಾವಣಾ ಬಾಂಡ್ ವಿವರಗಳನ್ನು ಚುನಾವಣಾ ಆಯೋಗ ಶುಕ್ರವಾರ ಸಂಜೆ 5 ಗಂಟೆಯೊಳಗೆ ಪ್ರಕಟಿಸಬೇಕು ಎಂದು ಕೋರ್ಟ್ ಸೂಚಿಸಿದೆ.

2019ರ ಏಪ್ರಿಲ್‌ 12ರಿಂದ ಈವರೆಗೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ವಿವರವನ್ನು ಮಾರ್ಚ್‌ 6ರೊಳಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಫೆ.15ರಂದು ಚುನಾವಣಾ ಬಾಂಡ್‌ಗಳನ್ನು ರದ್ದುಪಡಿಸುವ ಆದೇಶದೊಂದಿಗೆ ತಾಕೀತು ಮಾಡಿತ್ತು. ಅದನ್ನು ಜೂ.30ರ ವರೆಗೆ ವಿಸ್ತರಿಸುವಂತೆ ಎಸ್‌ಬಿಐ ಅರ್ಜಿ ಸಲ್ಲಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಗಡುವು ವಿಸ್ತರಿಸಲು ನಿರಾಕರಿಸಿ ತಕ್ಷಣವೇ ವಿವರ ಸಲ್ಲಿಸಲು ಸಿಬಿಐಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಸಿಬಿಐ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!