ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ :ಬಳ್ಳಾರಿ ಪ್ರವೇಶ ಮಾಡೋದಕ್ಕೆ ಗ್ರೀನ್‌ ಸಿಗ್ನಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಕ್ರಮ ಗಣಿಗಾರಿಕೆಯ  ಪ್ರಮುಖ ಆರೋಪಿ ಮಾಜಿ ಸಚಿವ ಗಂಗಾವತಿ ವಿಧಾನಸಭೆ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್‌ ತೆರವು ಮಾಡಿದೆ. ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ಸಾಕ್ಷ್ಯ ನಾಶ ಸಾಧ್ಯವಿಲ್ಲ ಎನ್ನುವ ವಾದ ಪುರಸ್ಕರಿಸಿದ ಕೋರ್ಟ್ ಜಾಮೀನಿನಲ್ಲಿದ್ದ ಷರತ್ತನ್ನು ರದ್ದು ಮಾಡಿದೆ.
- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!