May 10, 2026
Sunday, May 10, 2026
spot_img

ಪವನ್ ಖೇರಾಗೆ ‘ಸುಪ್ರೀಂ’ ಶಾಕ್: ತೆಲಂಗಾಣ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ದೊಡ್ಡ ಕಾನೂನು ಹಿನ್ನಡೆಯಾಗಿ, ಸುಪ್ರೀಂ ಕೋರ್ಟ್ ಬುಧವಾರ ತೆಲಂಗಾಣ ಹೈಕೋರ್ಟ್ ನೀಡಿದ್ದ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಆದೇಶಕ್ಕೆ ತಡೆ ನೀಡಿದೆ. ಅಸ್ಸಾಂ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಹೈಕೋರ್ಟ್ ಆದೇಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ.

ಈ ಪ್ರಕರಣವು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮ ಅವರ ಪತ್ನಿ ವಿರುದ್ಧ ಮಾಡಲಾದ ಆರೋಪಗಳಿಗೆ ಸಂಬಂಧಿಸಿದೆ. ಹಲವು ದೇಶಗಳ ಪಾಸ್‌ಪೋರ್ಟ್ ಹೊಂದಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿ ಅಸ್ಸಾಂ ಪೊಲೀಸರು ಖೇರಾ ವಿರುದ್ಧ ವಂಚನೆ, ನಕಲಿ ದಾಖಲೆ ಸೃಷ್ಟಿ ಮತ್ತು ಮಾನನಷ್ಟ ಸೇರಿದಂತೆ ಗಂಭೀರ ವಿಧಿಗಳಡಿ ಎಫ್‌ಐಆರ್ ದಾಖಲಿಸಿದ್ದರು.

ಇದನ್ನೂ ಓದಿ:

ಇದಕ್ಕೂ ಮೊದಲು ತೆಲಂಗಾಣ ಹೈಕೋರ್ಟ್ ಖೇರಾಗೆ ಒಂದು ವಾರದ ಟ್ರಾನ್ಸಿಟ್ ಆಂಟಿಸಿಪೇಟರಿ ಬೇಲ್ ನೀಡಿತ್ತು. ಆದರೆ ಈಗ ಸುಪ್ರೀಂ ಕೋರ್ಟ್ ಆ ರಿಲೀಫ್‌ಗೆ ತಡೆ ನೀಡಿದ್ದು, ಖೇರಾ ಅಸ್ಸಾಂನ ಸೂಕ್ತ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿದೆ. ಆದರೆ ಅಲ್ಲಿ ಹೊಸ ಅರ್ಜಿ ಸಲ್ಲಿಸಲು ಈ ಆದೇಶ ಅಡ್ಡಿಯಾಗುವುದಿಲ್ಲ ಎಂದೂ ನ್ಯಾಯಾಲಯ ತಿಳಿಸಿದೆ.

ಈ ತೀರ್ಪಿನ ಬಳಿಕ ಖೇರಾ ಎದುರು ಅಸ್ಸಾಂನಲ್ಲಿ ನೇರ ಕಾನೂನು ಹೋರಾಟ ನಡೆಸುವ ಅನಿವಾರ್ಯತೆ ಎದುರಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !