ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ ಅರೆಸ್ಟ್

ಹೊಸದಿಗಂತ ವರದಿ ಕಲಬುರಗಿ:

ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾಇಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಮೊದಲ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ ಹುಂಡೇಕರ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಕಲ್ಯಾಣ ಕರ್ನಾಟಕ ಮಹಿಳಾ ಕೋಟಾದಲ್ಲಿ ಸುಪ್ರಿಯಾ ಮೊದಲ ಸ್ಥಾನ ಪಡೆದಿದ್ದರು. ಕಿಂಗ್ ಪಿನ್ ಆರ್.ಡಿ. ಪಾಟೀಲ್ ಮೂಲಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಲಾಗಿತ್ತು. ಗುಲ್ಬರ್ಗ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಸಿಐಡಿ ಪ್ರಕರಣ ದಾಖಲಾಗಿದ್ದು, ಕಲಬುರಗಿಯಲ್ಲಿ ಪಿಎಸ್‌ಐ ಆರೋಪಿಗಳ ಬಂಧಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.

ಅಕ್ಟೋಬರ್ 2021ರಲ್ಲಿ ಪಿಎಸ್‌ಐ ನೇಮಕಾತಿಗೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಅಭ್ಯರ್ಥಿಗಳಿಂದ ಅಧಿಕಾರಿಗಳು ಲಂಚ ಪಡೆದು ಅಕ್ರಮ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಸಾಕಷ್ಟು ಒತ್ತಡ, ದೂರುಗಳು ಹೆಚ್ಚಾಗಿ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!