October 12, 2026
Monday, October 12, 2026
spot_img

ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎಐಸಿಸಿ ಕಾರ್ಯದರ್ಶನಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್‌ ಹೆಗ್ಡೆ ನಿಧನರಾಗಿದ್ದಾರೆ.

ನಿನ್ನೆ ರಾತ್ರಿ ಸೂರಜ್‌ ಹೆಗ್ಡೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸೂರಜ್ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂರಜ್‌ ಹೆಗ್ಡೆ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Must Read