ಸೂರಜ್‌ ಮಹಾನ್‌ ದೈವಭಕ್ತ, ಏನೂ ಆಗೋದಿಲ್ಲ ಹೊರಗೆ ಬರ್ತಾನೆ: ರೇವಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರಿಲ್ಲ. ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ‌. ಸೂರಜ್‌ ದೈವಭಕ್ತ, ಇದರಿಂದ ಬೇಗ ಹೊರಬರ್ತಾನೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಎಲ್ಲವೂ ನ್ಯಾಯಾಲಯದ ಮುಂದೆ ಇವೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಸೋಮವಾರ ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದು ಹೇಳಿದ್ದಾರೆ.

ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!