ಸೂರಜ್ ರೇವಣ್ಣ ಪರ ದೂರು ನೀಡಿದ್ದ ಆಪ್ತ ಶಿವಕುಮಾರ್ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸೂರಜ್ ನನ್ನು ಹಾಸನದ ಹೊಳೆನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇತ್ತ ಸೂರಜ್ ವಿರುದ್ಧ ದೂರು ನೀಡಿದ್ದ ಯುವಕನ ವಿರುದ್ಧವೇ ಪ್ರಕರಣ ದಾಖಲಿಸಿದ್ದ ಸೂರಜ್ ರೇವಣ್ಣ ಆಪ್ತ ಈಗ ನಾಪತ್ತೆಯಾಗಿದ್ದಾನೆ.

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಅರಕಲಗೂಡು ಮೂಲದ ಯುವಕ ಎಸ್ ಪಿ, ಡಿವೈಎಸ್ ಪಿ, ಗೃಹ ಸಚಿವರಿಗೆ ದೂರು ನೀಡಿದ್ದನು. ವಿಷಯ ಗೊತ್ತಾಗುತ್ತಿದ್ದಂತೆ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಸಂತ್ರಸ್ತ ಯುವಕನ ವಿರುದ್ಧ ಬೆದರಿಕೆ ಹಾಗೂ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದನು.

ಈಗ ಸೂರಜ್ ರೇವಣ್ಣ ಬಂಧನವಾಗುತ್ತಿದ್ದಂತೆ ಸೂರಜ್ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದಾನೆ. ದೂರು ನೀಡಿದ ನಂತರದಿಂದ ಶಿವಕುಮಾರ್ ಸಂಪರ್ಕಕ್ಕೆ ಸಿಗುತ್ತಿಲ್ಲ . ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಸೂರಜ್ ರೇವಣ್ಣ ಜೊತೆಗಿದ್ದೇ ಪಿತೂರಿ ನಡೆಸಿದ್ದನಾ? ಬೇರೆಯವರ ಜೊತೆ ಸೇರಿ ಸೂರಜ್ ನನ್ನು ಟ್ರ್ಯಾಪ್ ಮಾಡಿದ್ದನಾ? ಎಂಬ ಅನುಮಾನ ಮೂಡಿದೆ. ಶಿವಕುಮಾರ್ ಪತ್ತೆಗಾಗಿ ಪೊಲಿಸರು ಶೋಧ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!