ಮೋದಿ ಉಪನಾಮ ಹೇಳಿಕೆ: ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿ ತಿರಸ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ನ್ಯಾಯಾಲಯ ಇಂದು ವಜಾಗೊಳಿಸಿದೆ. ಇದರಿಂದ ರಾಹುಲ್​ ಗಾಂಧಿ ಅವರ ಸಂಸದ ಸ್ಥಾನದ ಅನರ್ಹತೆ ಮುಂದುವರಿಯಲಿದೆ.

ಸೂರತ್​ನ ಕೆಳಹಂತದ ನ್ಯಾಯಾಲಯ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್​ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಕಾಂಗ್ರೆಸ್ ನಾಯಕ ಸೆಷನ್ಸ್​ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿದ್ದರು. ಕೋರ್ಟ್​ನಲ್ಲಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.ರಾಹುಲ್​ ಗಾಂಧಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಒಂದೇ ಸಾಲಿನಲ್ಲಿ ತೀರ್ಪು ನೀಡಿದ ಕೋರ್ಟ್​, ಮೇಲ್ಮನವಿಯನ್ನು ವಜಾಗೊಳಿಸಿದೆ. ಮಾಜಿ ಸಂಸದರಿಗೆ ನೀಡಲಾದ ಶಿಕ್ಷೆಯನ್ನು ಅಮಾನತು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​ ಜಾಮೀನು ಪಡೆದಿದ್ದು, ಬಂಧನದಿಂದ ಸದ್ಯಕ್ಕೆ ತಪ್ಪಿಸಿಕೊಂಡಂತಾಗಿದೆ.

ಪ್ರಕರಣದ ಹಿನ್ನೆಲೆ :

2019 ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿಯವರು ಮೋದಿ ಉಪನಾಮವನ್ನು ಬಳಸಿ ಟೀಕೆ ಮಾಡಿದ್ದರು. ಇದು ವಿವಾದಕ್ಕೀಡಾಗಿತ್ತು, ಇದು ಹಿಂದುಳಿದ ವರ್ಗಗಳಿಗೆ ಮಾಡಿದ ಅವಮಾನ ಎಂದು ಆರೋಪಿಸಿ ಶಾಸಕ ಪೂರ್ಣೇಶ್​ ಮೋದಿ ಕ್ರಿಮಿನಲ್​ ಕೇಸ್​ ದಾಖಲಿಸಿದ್ದರು. ಇದರಲ್ಲಿ ರಾಹುಲ್​ ದೋಷಿ ಎಂದು ಕೋರ್ಟ್​ ತೀರ್ಪು ಕೊಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!