Monday, August 15, 2022

Latest Posts

ಸೂರತ್ ಪೊಲೀಸರು ಕ್ರಿಮಿನಲ್ ಗ್ಯಾಂಗ್ ಹಿಡಿದ ರೋಚಕ ವಿಡಿಯೊ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಪ್ಪಿಸಿಕೊಂಡು ಹೋಗುತ್ತಿದ್ದ ಖತರ್ನಾಕ್‌ ಗ್ಯಾಂಗ್‌ ಅನ್ನು ಸೂರತ್ ಅಪರಾಧ ವಿಭಾಗದ ಪೊಲೀಸರು ಅತ್ಯಂತ ರೋಚಕವಾಗಿ ಹಿಡಿದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಪೊಲೀಸರ ಕಾರ್ಯಾಚರಣೆಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ದಕ್ಷಿಣ ಗುಜರಾತ್‌ನಲ್ಲಿ ಚಿಖ್ಲಿಗರ್ ಗ್ಯಾಂಗ್ ತಪ್ಪಿಸಿಕೊಂಡು ಕಾರಿನಲ್ಲಿ ಪರಾರಿಯಾಗುತ್ತಿದ್ದವರ ಕಾರನ್ನು ಅಡ್ಡಗಟ್ಟಿ ದೊಣ್ಣೆಗಳಿಂದ ಕಾರಿನ ಗಾಜು ಪುಡಿ ಮಾಡಿದ್ದಾರೆ. ಹಿಂದಕ್ಕೆ ಚಲಿಸುತ್ತಿದ್ದ ಕಾರನ್ನು ಜೆಸಿಬಿ ಮೂಲಕ ತಡೆದು ಹಿಂದೆ-ಮುಂದೆ ಎಲ್ಲಿಯೂ ಹೋಗದಂತೆ ಲಾಕ್‌ ಮಾಡಿ ಬಂಧಿಸಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss