ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಸುರತ್ಕಲ್‌ ನಲ್ಲಿ ನಡೆದಿದೆ.

ಸುರತ್ಕಲ್‌ 3ನೇ ಬ್ಲಾಕ್‌ ನಲ್ಲಿ ವಾಸಿಸುತ್ತಿದ್ದ ಯುವತಿ, ಮಣಪ್ಪುರಂ ಫೈನಾನ್ಸ್‌ ನಲ್ಲಿ ಉದ್ಯೋಗಿಯಾಗಿದ್ದಾರೆ. ಜನವರಿ 16 ರಂದು ಕೆಲಸಕ್ಕೆಂದು ಹೋದವರು ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ.

ಸಂಸ್ಥೆಯ ಇತರ ಸಿಬ್ಬಂದಿಗಳಲ್ಲಿ ವಿಚಾರಿಸಿದಾಗ ಹೆಚ್ಚಿನ ಮಾಹಿತಿ ಸಿಕ್ಕಿರುವುದಿಲ್ಲ. ಅಲ್ಲದೆ ಯುವತಿಯ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಸದ್ಯ ಪ್ರಕರಣವು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!