ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಭಾಗದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ ದಾಳಿಗೆ ಯುವಕ ಬಲಿಯಾದ ಬೆನ್ನಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸುರತ್ಕಲ್, ಬಜ್ಪೆ, ಮುಲ್ಕಿ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.