ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ತಂಡದ ಮಾಜಿ ಆಲ್ರೌಂಡರ್ ಸುರೇಶ್ ರೈನಾ ಅವರ ತಂದೆ ತ್ರಿಲೋಕಚಂದ್ ರೈನಾ ಭಾನುವಾರ ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತಮ್ಮ ಘಾಜಿಯಾಬಾದ್ನ ಮನೆಯಲ್ಲಿ ನಿಧನರಾಗಿದ್ದಾರೆ.
ತ್ರಿಲೋಕಚಂದ್ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು ಮತ್ತು ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಬಾಂಬ್ ತಯಾರಿಸುವ ಪಾಂಡಿತ್ಯ ಹೊಂದಿದ್ದರು ಎನ್ನಲಾಗಿದೆ.
ಸುರೇಶ್ ರೈನಾ ತಂದೆಯ ನಿಧನಕ್ಕೆ ಮಾಜಿ ಕ್ರಿಕೆಟರ್ ಹರ್ಭಜನ್ ಸಿಂಗ್ ಸಂತಾಪ ಸೂಚಿಸಿದ್ದಾರೆ.