ಹೊಸದಿಗಂತ ಡಿಜಿಟಲ್ ಡೆಸ್ಕ್:
ತೀವ್ರ ಬೆನ್ನು ನೋವಿನ ಕಾರಣ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಳ್ಳಾರಿ ಜೈಲಿನಲ್ಲಿದ್ದ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರಿಗೆ ಸೂಕ್ತ ಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ಆದ್ದರಿಂದ ಹೈಕೋರ್ಟ್ ಅವರಿಗೆ ಆರು ತಿಂಗಳ ಮಧ್ಯಂತರ ಜಾಮೀನು ನೀಡಿದೆ.
ದರ್ಶನ್ ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಇದೀಗ ತಿಳಿಸಿದ್ದಾರೆ.
ದರ್ಶನ್ ಅವರಿಗೆ ಬೆನ್ನುನೋವಿನ ಸಮಸ್ಯೆ ಇದೆ ಎನ್ನಲಾಗಿದೆ. ಇದರಿಂದಾಗಿ ಅವರು ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಅವರ ಕಾಲು ಕೂಡ ದುರ್ಬಲವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರನ್ನು ನಿರಂತರವಾಗಿ ಪರೀಕ್ಷಿಸಿದ ವೈದ್ಯರು, ಆಪರೇಷನ್ ಮಾಡಲು ನಿರ್ಧರಿಸಿದ್ದಾರೆ. ಇದಾದ ನಂತರ ಅವರಿಗೆ ಪರಿಹಾರ ಸಿಗುವುದೇ ಎಂಬ ಪ್ರಶ್ನೆ ಮೂಡಿದೆ.