ನೇಜಾರು ಹತ್ಯಾಕಾಂಡದ ಆರೋಪಿ ಚೌಗಲೆಗೆ ಶಸ್ತ್ರಚಿಕಿತ್ಸೆ: ಚಾರ್ಜ್ ಪ್ರಕ್ರಿಯೆ ಮುಂದೂಡಿಕೆ

ಹೊಸದಿಗಂತ ಮಂಗಳೂರು:

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಉಡುಪಿ ಜಿಲ್ಲೆ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಆರೋಪಿ ಪ್ರವೀಣ್ ಚೌಗುಲೆ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದು, ಆತನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ.

ಇದೇ ಸಂದರ್ಭ ಆರೋಪಿ ಚೌಗಲೆ ಮೇಲಿನ ಚಾರ್ಜ್ ಪ್ರಕ್ರಿಯೆಯನ್ನು ಆತನ ಅನಾರೋಗ್ಯದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಲಯವು ಮಾ.27ಕ್ಕೆ ಮುಂದೂಡಿದೆ.

ಮಾ. 13ರಂದು ಚಾರ್ಜ್‌ಗೆ ದಿನ ನಿಗದಿಯಾಗಿತ್ತು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ಅದೇ ದಿನ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮಲ್ಪೆ ಪೊಲೀಸರಿಗೆ ನಿರ್ದೇಶಿಸಲಾಗಿತ್ತು. ಇದೇ ಸಂದರ್ಭ ಚೌಗುಲೆಗೆ ಕಿಡ್ನಿ ಸ್ಟೋನ್ ಕಾಣಿಸಿಕೊಂಡಿದ್ದು, ನ್ಯಾಯಾಲಯದ ಆದೇಶದಂತೆ ಚಿಕಿತ್ಸೆ ನೀಡಿ ಬಳಿಕ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಧ್ಯವಾಗುತ್ತಿಲ್ಲ ಎಂಬ ಬಗ್ಗೆ ಅಗತ್ಯ ದಾಖಲೆಗಳನ್ನು ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಈ ಸಂದರ್ಭ ಹಾಜರಿದ್ದರು. ಇನ್ನು ಆರೋಪಿ ಚೌಗುಲೆ ಬುಧವಾರ ಎರಡನೇ ಬಾರಿಗೆ ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಮಾ. 27ರಂದು ವಿಶೇಷ ಸರಕಾರಿ ಅಭಿಯೋಜಕರಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!