ಶೀಘ್ರವೇ ಸಿದ್ದರಾಮಯ್ಯ ಸಂಪುಟಕ್ಕೆ ಸರ್ಜರಿ?: ದೆಹಲಿಯತ್ತ ಹೊರಟ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಶೀಘ್ರವೇ ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ ಸರ್ಜರಿ ನಡೆಯಲಿದೆ ಎಂಬ ಸುದ್ದಿ ದಟ್ಟವಾಗುತ್ತಿದೆ. ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಗುರುವಾರ ದೆಹಲಿಗೆ ತೆರಳಲಿದ್ದಾರೆ.

ಸಂಪುಟ ಪುನಾರಚನೆ ಜೊತೆಗೆ ಕೆಪಿಸಿಸಿ (KPCC) ಅಧ್ಯಕ್ಷರ ಬದಲಾವಣೆ ವಿಚಾರವಾಗಿಯೂ ಹೈಕಮಾಂಡ್ ಜೊತೆ ಸಿಎಂ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಜನವರಿಯಲ್ಲಿ ಸಂಪುಟ ಸರ್ಜರಿ ಜೊತೆಗೆ ಕೆಪಿಸಿಸಿಗೆ ಹೊಸ ಸಾರಥಿ ಬರುವ ನಿರೀಕ್ಷೆ ಇದೆ. ಆರ್‌ಬಿ ತಿಮ್ಮಾಪುರಗೆ ಕೊಕ್ ನೀಡಿ, ನಾಗೇಂದ್ರರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವ ಬಗ್ಗೆಯೂ ಚರ್ಚೆಗಳು ನಡೆದಿವೆ ಎನ್ನಲಾಗ್ತಿದೆ. ಆದರೆ ಸಂಪುಟ ಸರ್ಜರಿ ಕುರಿತಾಗಿ ಕಾಂಗ್ರೆಸ್ ನಾಯಕರು ಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ. ಯಾರೂ ಈ ಬಗ್ಗೆ ಸ್ಪಷ್ಟವಾದ ಹೇಳಿಕೆ ನೀಡಿಲ್ಲ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!