ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ಸುರ್ಜೆವಾಲ, ಮೂರು ಸಭೆ, ಡಿನ್ನರ್‌ ಮೀಟಿಂಗ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಇಂದು ಸೋಮವಾರ ರಾಜ್ಯ ರಾಜಧಾನಿಗೆ ಆಗಮಿಸುತ್ತಿದ್ದು, ಮೂರು ಸಭೆಗಳನ್ನು ನಡೆಸಲಿದ್ದಾರೆ.

ಮೂಲಗಳ ಪ್ರಕಾರ, ಸುರ್ಜೆವಾಲ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿರುವ ಜೈ ಬಾಪು, ಜೈ ಸಂವಿಧಾನ್ ಅಧಿವೇಶನಕ್ಕೆ ಪೂರ್ವಸಿದ್ಧತೆಗೆ ಈ ಸಭೆ ನಡೆಸಲಿದ್ದಾರೆ. ಇದೇ ಹೊತ್ತಲ್ಲಿ, ಕಾಂಗ್ರೆಸ್​ನ ಆಂತರಿಕ ಕಲಹ ಸರಿಪಡಿಸುವ ಪ್ರಯತ್ನವನ್ನೂ ಅವರು ಮಾಡುವ ನಿರೀಕ್ಷೆ ಇದೆ. ಕೆಲಸ ಈ ಸಂದರ್ಭದಲ್ಲಿ ಆಗುವ ನಿರೀಕ್ಷೆ ಇದೆ.

ರಾಜ್ಯಸಭಾ ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆದ ರಣದೀಪ್ ಸಿಂಗ್ ಸುರ್ಜೆವಾಲ ಅವರು ನಿನ್ನೆ ತಡರಾತ್ರಿ ಆಗಮಿಸಬೇಕಿತ್ತು. ಇವತ್ತು ಸೋಮವಾರ ಬೆಳಗ್ಗೆ 11 ಗಂಟೆಯೊಳಗೆ ಬೆಂಗಳೂರು ತಲುಪಲಿದ್ದಾರೆ. ಇವತ್ತು ಮೂರು ಸಭೆ ನಡೆಯಲಿದ್ದು, ಮೊದಲ ಸಭೆ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ. ಕೆಪಿಸಿಸಿ ವಿಸ್ತೃತ ಸರ್ವ ಸದಸ್ಯರ ಸಭೆ ಇದಾಗಿದೆ.

ಮಧ್ಯಾಹ್ನ 3 ಗಂಟೆಗೆ ಇದೇ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯೂ ನಡೆಯುತ್ತದೆ. ಸಂಜೆ 6 ಗಂಟೆಗೆ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇದರಲ್ಲಿ ಸುರ್ಜೆವಾಲ ಕೂಡ ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!