ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು, ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ ಎನ್ನಲಾಗಿದೆ. ಈ ನಡುವೆ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯೋಗದ ಸದಸ್ಯರಲ್ಲೊಬ್ಬರಾದ ಅರುಣ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಭಾರತ ಚುನಾವಣಾ ಆಯೋಗದಲ್ಲಿ ಈಗಾಗಲೇ ಒಂದು ಹುದ್ದೆ ಖಾಲಿ ಇದ್ದು. ಈಗ ಉಳಿದಿರುವುದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತ್ರ.
ಮುಂದಿನ ವಾರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ವೇಳೆ ಗೋಯೆಲ್ ರಾಜೀನಾಮೆ ಪರಿಣಾಮ ಬೀರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.