ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿ ಅಂಶಗಳು ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಹೇಳಿದ್ದಾರೆ. ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇಕಡಾ 95ರಷ್ಟು ಪ್ರವಾಹ ಸಂಭವಿಸಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವುದನ್ನು ಸ್ವಾಗತಿಸಿದ್ದಾರೆ.
ಇದೆ ಸಂದರ್ಭ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಅವರು, ಖರ್ಗೆ ಅವರ ಆರೋಗ್ಯ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.
ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ, ಅಂಕಿ ಅಂಶ ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ
