ಫಲ ನೀಡಲಿಲ್ಲ ಸೂರ್ಯ ಕುಮಾರ್ ಯಾದವ್ ಸ್ಫೋಟಕ ಶತಕ: ಭಾರತಕ್ಕೆ 17 ರನ್ ಸೋಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೂರನೇ ಟಿ-20 ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ಸ್ಫೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದರೂ, ಇತರರ ಸಾಥ್ ಇಲ್ಲದೇ ಟೀಂ ಇಂಡಿಯಾ 17 ರನ್ ಸೋಲು ಕಂಡಿದೆ. ಈ ಮೂಲಕ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.
ಗೆಲುವಿಗೆ 216 ರನ್ ಬೃಹತ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರಿಷಬ್ ಪಂತ್ ಕೇವಲ 1 ರನ್ ಸಿಡಿಸಿ ಔಟಾದರು. ಸತತ ವೈಫಲ್ಯದಿಂದ ಕಂಗೆಟ್ಟಿರುವ ವಿರಾಟ್ ಕೊಹ್ಲಿ ಮತ್ತೆ ನಿರಾಸೆ ಅನುಭವಿಸಿದರು. ಕೊಹ್ಲಿ 11 ರನ್ ಸಿಡಿಸಿ ಔಟಾದರು.
ಒಂದೆಡೆ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಅವರಿಗೆ ಕೊಂಚ ಶ್ರೇಯಸ್ ಅಯ್ಯರ್ ಸಾಥ್ ಕೊಟ್ಟರು. ಅಯ್ಯರ್ 28 ರನ್ ಸಿಡಿಸಿ ಔಟಾದರು.
ಇದರ ನಡುವೆ ಟೀಂ ಇಂಡಿಯಾ ವಿಕೆಟ್ ಪತನಗೊಳ್ಳುತ್ತಿದ್ದರೂ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ನಡೆಸಿ ಚೊಚ್ಚಲ ಟಿ20 ಶತಕ ಸಿಡಿಸಿ ಸಂಭ್ರಮಿಸಿದರು.
ಇನ್ನೊಂದೆಡೆ ದಿನೇಶ್ ಕಾರ್ತಿಕ್ 6 ರನ್ ಸಿಡಿಸಿ ಔಟಾದರು. ಇತ್ತ ರವೀಂದ್ರ ಜಡೇಜಾ 7 ರನ್ ಸಿಡಿಸಿ ನಿರ್ಗಮಿಸಿದರು. ಇತ್ತ ಸೂರ್ಯಕುಮಾರ್ ಯಾದವ್ 55 ಎಸೆತದಲ್ಲಿ 14 ಬೌಂಡರಿ ಹಾಗೂ 6 ಸಿಕ್ಸರ್ ಮೂಲಕ 117 ರನ್ ಸಿಡಿಸಿ ಔಟಾದರು.
ಅಂತಿಮ 6 ಎಸೆತದಲ್ಲಿ ಭಾರತದ ಗೆಲುವಿಗೆ 21 ರನ್ ಅವಶ್ಯಕತೆ ಇತ್ತು. ಆದರೆ ಸೂರ್ಯಕುಮಾರ್ ಯಾದವ್ ವಿಕೆಟ್ ಪತನ ಟೀಂ ಇಂಡಿಯಾ ಗೆಲುವಿನ ದಾರಿಗೆ ಮುಚ್ಚಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!