ಗವಿಗಂಗಾಧರೇಶ್ವರನ ಸ್ಪರ್ಶಿಸಿದ ಸೂರ್ಯ ರಶ್ಮಿ: ಅಧ್ಭುತ ಕ್ಷಣ ಕಣ್ತುಂಬಿಕೊಂಡ ಭಕ್ತರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಕರ ಸಂಕ್ರಮಣದ ದಿನ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸಂಜೆ 5.15ರಿಂದ 5:30ರ ಸಮಯದಲ್ಲಿ ಸೂರ್ಯ ದೇವ ಶಿವಲಿಂಗವನ್ನು ಸ್ಪರ್ಶಿಸಿ ನಮಸ್ಕರಿಸಿದ್ದು, ಈ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತರು ಪುನೀತರಾದರು.

ಮಕರ ಸಂಕ್ರಾಂತಿಯಂದು ಸೂರ್ಯ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಸಂದರ್ಭ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯ ರಶ್ಮಿ ಗವಿಗಂಗಾಧರೇಶ್ವರನ ಪಾದಸ್ಪರ್ಶ ಮಾಡುವ ಮೂಲಕ ವಿಸ್ಮಯಕ್ಕೆ ಕಾರಣವಾಯಿತು.

ನಂದಿ ವಿಗ್ರಹದ ಮೂಲಕವಾಗಿ ಶಿವಲಿಂಗದ ಗರ್ಭಗುಡಿಯ ಕತ್ತಲನ್ನು ಸೀಳಿಕೊಂಡು ಬಂದ ಸೂರ್ಯನ ಕಿರಣಗಳು ಶಿವಲಿಂಗ ಪಾದ ಸ್ಪರ್ಶಿಸಿಸಿ ಬಳಿಕ ಶಿವನ ಶಿಖರವನ್ನು ಸ್ಪರ್ಶಿಸಿ ಮರೆಯಾಯಿತು. ಈ ಅಧ್ಭುತ ಕ್ಷಣಗಳನ್ನು ನೆರೆದಿದ್ದ ಭಕ್ತರು ಭಕ್ತಿಯಿಂದ ಕಣ್ತುಂಬಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!