ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ: ವಿಜ್ಞಾನಿಗಳಿಗೆ ನಾನು ತಲೆಬಾಗುತ್ತೇನೆ ಎಂದ ಅರುಣ್‌ ಯೋಗಿರಾಜ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ ಬಾಲರಾಮನಿಗೆ ಸೂರ್ಯ ಅಭಿಷೇಕ ನಡೆಯಿತು. ಭಗವಾನ್ ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ ನಂತರ ಸೂರ್ಯ ರಶ್ಮಿ ರಾಮ ಲಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಿತು.

ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಂಡ ಶಿಲ್ಪಿ ಅರುಣ್‌ ಯೋಗಿರಾಜ್‌, ಬಾಲರಾಮನ ಹಣೆಯ ಮೇಲಿನ ಸೂರ್ಯ ತಿಲಕವನ್ನು ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ನಾನು ತಲೆಬಾಗುತ್ತೇನೆ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ (Ayodhya) ಇಂದು ರಾಮಲಲಾನ ದರುಶನ ಪಡೆದ ಬಳಿಕ ಪ್ರತಿಕ್ರಿಯಿಸಿದ ಅವರು, ರಾಮನ ದರುಶನಕ್ಕೆ ಲಕ್ಷಾಂತರ ಜನರು ಬರುತ್ತಿದ್ದಾರೆ. ಶ್ರೀರಾಮನ ಆಶೀರ್ವಾದದಿಂದ ನಾನು ಕೂಡ ಇಂದು ನನ್ನ ಕುಟುಂಬದೊಂದಿಗೆ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

ಸೂರ್ಯ ತಿಲಕದ (Surya Tilak) ಬಗ್ಗೆ ಮಾತನಾಡಿ, ಇಂದಿನ ಸೂರ್ಯ ತಿಲಕವನ್ನು ನಾನು ಯಾವತ್ತೂ ಮರೆಯಲು ಸಾಧ್ಯವಿಲ್ಲ. ಸೂರ್ಯ ತಿಲಕವನ್ನು ಸಾಧ್ಯವಾಗಿಸಿದ ವಿಜ್ಞಾನಿಗಳ ಮುಂದೆ ನಾನು ತಲೆಬಾಗಲು ಬಯಸುತ್ತೇನೆ. ಈ ಕ್ಷಣವನ್ನು ವೀಕ್ಷಿಸಲು ಸಾಧ್ಯವಾಗಿದ್ದು ನನ್ನ ಅದೃಷ್ಟವೇ ಸರಿ ಎಂದು ಅರುಣ್‌ ಯೋಗಿರಾಜ್‌ ತಿಳಿಸಿದರು.

ವಿಜ್ಞಾನಿಗಳು ನಾಲ್ಕು ವರ್ಷಗಳಿಂದ ಸೂರ್ಯ ತಿಲಕವನ್ನು ಸಾಧ್ಯವಾಗಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ವಿಜ್ಞಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಯಿತು. ನಾನು ಅತ್ಯಂತ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ನಾವು ಇದನ್ನೆಲ್ಲಾ ಕಥೆಗಳಲ್ಲಿ ಮಾತ್ರ ಕೇಳಿದ್ದೇವೆ, ಆದರೆ ಇಂದು ನಮ್ಮ ವಿಜ್ಞಾನಿಗಳು ಇದನ್ನು ಸಾಧ್ಯವಾಗಿಸಿದ್ದಾರೆ ಎಂದು ಅರುಣ್‌ ಅವರು ವಿಜ್ಞಾನಿಗಳ ಕಾರ್ಯವನ್ನು ಶ್ಲಾಘಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!