Friday, December 9, 2022

Latest Posts

ಟಿ20 ರ‍್ಯಾಂಕಿಂಗ್‌ನಲ್ಲಿ ಸೂರ್ಯಕುಮಾರ್ ಅಗ್ರಸ್ಥಾನ, ಏಕದಿನದಲ್ಲಿ ಆರಕ್ಕೆ ಏರಿದ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಪುರುಷರ ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ನ್ಯೂಜಿಲ್ಯಾಂಡ್​​ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಅಜೇಯ 111 ರನ್ ಸಿಡಿಸಿದ್ದರು. ಈ ಮೂಲಕ ಟಿ20 ರ‍್ಯಾಂಕಿಂಗ್‌ನಲ್ಲಿ ತಮ್ಮ ಅಗ್ರ ಸ್ಥಾನವನ್ನು ಬಲಪಡಿಸಿಕೊಂಡಿದ್ದಾರೆ. ಒಟ್ಟಾರೆ 890 ಪಾಯಿಂಟ್​ಗಳನ್ನು ಹೊಂದಿದ್ದಾರೆ.

ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್‌ ಎರಡನೇ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ, ನ್ಯೂಜಿಲ್ಯಾಂಡ್​ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ತಮ್ಮ ಟಿ20 ರ‍್ಯಾಂಕಿಂಗ್‌ನಲ್ಲಿ ತಮ್ಮ ಸ್ಥಾನವನ್ನು ಉತ್ತಮ ಪಡಿಸಿಕೊಂಡಿದ್ದಾರೆ. ಕೊನೆ ಪಂದ್ಯದಲ್ಲಿ ಅಜೇಯ 30 ರನ್ ಗಳಿಸುವ ಮೂಲಕ ಬ್ಯಾಟರ್‌ಗಳ ಜಂಟಿ 50ನೇ ಸ್ಥಾನವನ್ನು ತಲುಪಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಎರಡು ಸ್ಥಾನ ಮೇಲೇರಿ 11ನೇ ಸ್ಥಾನಕ್ಕೆ ತಲುಪಿದ್ದಾರೆ. ಎಡಗೈ ಸೀಮರ್ ಅರ್ಷದೀಪ್ ಸಿಂಗ್ 21ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಎಂಟು ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದಾರೆ.

ಏಕದಿನ ರ‍್ಯಾಂಕಿಂಗ್‌
ಟೀಂ ಇಂಟಿಯಾದ ಭರವಸೆಯ ಆಟಗಾರರ ವಿರಾಟ್ ಕೊಹ್ಲಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಆರನೇ ಸ್ಥಾನಕ್ಕೆ ಏರಿದ್ದು, ಮತ್ತೊಬ್ಬ ಬ್ಯಾಟರ್​ ರೋಹಿತ್ ಶರ್ಮಾ ಎಂಟನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ 11ನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!