ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ಟಿ20 ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಗೆದ್ದ ಬಳಿಕ ಪತ್ನಿ ದೇವಿಶಾ ಶೆಟ್ಟಿಯೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಸೂರ್ಯ ಕುಮಾರ್ ಯಾದವ್ ಆಶ್ಲೇಷ ಬಲಿ ಪೂಜೆ ,ಮಹಾಪೂಜೆ ಅಭಿಷೇಕವನ್ನು ನೆರವೇರಿಸಿದರು. ದೇವಸ್ಥಾನದ ವತಿಯಿಂದ ಯಾದವ್ ದಂಪತಿಗೆ ಗೌರವ ಸಮರ್ಪಿಸಲಾಯಿತು.
ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು. ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಅದರಂತೆ ಬಳಿಕ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದರು.