ಆಸ್ಪತ್ರೆಯಲ್ಲಿ ಸೂರ್ಯಕುಮಾರ್ ಯಾದವ್: ಅಷ್ಟಕ್ಕೂ ಆಗಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್;

ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿದ ಬಳಿಕ ಜರ್ಮನಿಯಲ್ಲಿದ್ದಾರೆ.

ಇತ್ತೀಚೆಗಷ್ಟೆ ಸೂರ್ಯಕುಮಾರ್ ಯಾದವ್ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಕ್ರೀಡಾ ಹರ್ನಿಯಾಗೆ ಯಶಸ್ವಿ ಶಸ್ತ್ರಚಿಕಿತ್ಸೆ ಆಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

34 ವರ್ಷದ ಸೂರ್ಯಕುಮಾರ್ ತಮ್ಮ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು, ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಶಸ್ತ್ರಚಿಕಿತ್ಸೆಯಿಂದಾಗಿ ಅವರು ಮುಂಬವರು ಬಾಂಗ್ಲಾದೇಶ ಪ್ರವಾಸಕ್ಕೆ ಹೋಗುವ ಸಾಧ್ಯತೆ ಕಡಿಮೆ. ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಅವರಿಗೆ 6 ರಿಂದ 12 ವಾರಗಳು ಬೇಕಾಗುತ್ತದೆ. ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಇವರು ಮಹತ್ವದ ಪಾತ್ರ ವಹಿಸಲಿದ್ದಾರೆ.

ಸೂರ್ಯಕುಮಾರ್ ಯಾದವ್ ಸಾಮಾಜಿಕ ಮಾಧ್ಯಮದಲ್ಲಿ, ‘ಜೀವನದ ನವೀಕರಣ, ಹೊಟ್ಟೆಯ ಕೆಳಭಾಗದಲ್ಲಿ ಕ್ರೀಡಾ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ, ನಾನು ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ತಿಳಿಸಲು ಸಂತೋಷವಾಗಿದೆ. ಕ್ರಿಕೆಟ್ ಮೈದಾನಕ್ಕೆ ಮರಳಲು ಕಾತುರದಿಂದ ಕಾಯುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!