ಐಸಿಸಿಯಿಂದ ವಿಶಿಷ್ಟ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಐಸಿಸಿಯಿಂದ ವಿಶಿಷ್ಟ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ವರ್ಷದ ಅತ್ಯುತ್ತಮ ಟಿ20 ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ.

ಈ ಮೂಲಕ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಎನಿಸಿಕೊಂಡರು.

31 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 46.56ರ ಅತ್ಯುತ್ತಮ ಸರಾಸರಿಯಲ್ಲಿ 1164 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕಗಳು ಮತ್ತು 9 ಅರ್ಧ ಶತಕಗಳು ಸೇರಿವೆ.

ಐಸಿಸಿ ಟಿ20 ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ 908 ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಪರ 45 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 46.41 ರ ಅತ್ಯುತ್ತಮ ಸರಾಸರಿಯಲ್ಲಿ 1578 ರನ್ ಗಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!