ಸೂರ್ಯನ ಏಕಾಂಗಿ ಹೋರಾಟ: ಆಫ್ರಿಕಾಕ್ಕೆ 134 ರನ್ ಟಾರ್ಗೆಟ್ ನೀಡಿದ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಆಫ್ರಿಕಾ ತಂಡದ ಬೌಲಿಂಗ್ ದಾಳಿಗೆ ಎಡವಿದ ಟೀಮ್ ಇಂಡಿಯಾಕ್ಕೆ ಸೂರ್ಯಕುಮಾರ್ ಯಾದವ್ ಆಸರೆಯಾಗಿ ನಿಂತಿದ್ದು ಆಕರ್ಷಕ ಅರ್ಧಶತಕದ ನೆರವಿನಿಂದ ರೋಹಿತ್ ಪಡೆ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 133 ರನ್ ಬಾರಿಸಿ ಸ್ಪರ್ಧಾತ್ಮಕ ಗುರಿ ನೀಡಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಇಳಿದರು. ನಾಯಕ ರೋಹಿತ್ ಶರ್ಮಾ 14 ಎಸೆತಗಳಲ್ಲಿ 15 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಕೆ ಎಲ್ ಮೂರನೇ ಪಂದ್ಯದಲ್ಲೂ ಮತ್ತೆ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ವಿಫಲರಾದರು.

ವಿರಾಟ್ ಕೊಹ್ಲಿ1 ರನ್ ಬಾರಿಸುತ್ತಿದ್ದಂತೆಯೇ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸಾವಿರ ರನ್ ಪೂರೈಸಿದ ಎರಡನೇ ಭಾರತೀಯ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾದರು. ಇದರ ಬೆನ್ನಲ್ಲೇ 12 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಔಟಾದರು. ದೀಪಕ್ ಹೂಡಾ ಖಾತೆ ತೆರೆಯುವ ಮುನ್ನವೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಪೆರೇಡ್ ನಡೆಸಿದರು. ಹಾರ್ದಿಕ್ ಪಾಂಡ್ಯ 2 ರನ್ ಗಳಿಸಿ ಔಟದರು.

ಈ ವೇಳೆ ತಂಡಕ್ಕೆ ಆಸರೆಯಾದ ಸೂರ್ಯಕುಮಾರ್ ಯಾದವ್ ತಂಡದ ಮೊತ್ತವನ್ನು ಏರಿಸಿದರು. ಇತ್ತ ದಿನೇಶ್ ಕಾರ್ತಿಕ್ 6 ರನ್ ಗಳಿಸಿ ಪೆವಿಲಿಯನ್ ನತ್ತ ಸಾಗಿದರು.
ಒಟ್ಟು 40 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 68 ರನ್ ಬಾರಿಸಿ 19ನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!