Sunday, August 14, 2022

Latest Posts

ಸಾಗರ್ ರಾಣಾ ಕೊಲೆ ಪ್ರಕರಣ: ಪೊಲೀಸರಿಗೆ ಶರಣಾಗಲು ಬಯಸಿದ ಕುಸ್ತಿಪಟು ಸುಶೀಲ್​ ಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸಂಬಂಧಿಸಿ ಶಂಕಿತ ಆರೋಪಿಯಾಗಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್​ ಕುಮಾರ್​ ಪೊಲೀಸರಿಗೆ ಶರಣಾಗಲು ಬಯಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಎರಡು ವಾರಗಳಿಂದ ದೆಹಲಿ ಪೊಲೀಸರು ಸಾಗರ್​ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್​ರನ್ನು ಬಂಧಿಸಲು ಹುಡುಕುತ್ತಿದ್ದಾರೆ. ಅಲ್ಲದೇ ಪೊಲೀಸ್ ತಂಡ ಡೆಲ್ಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಈಗಾಗಲೇ ದಾಳಿ ನಡೆಸಿದೆ.
ಇದೇ ವೇಳೆ ದೆಹಲಿ ಹೈಕೋರ್ಟ್​ ಕೂಡ ಸುಶೀಲ್​ ಕುಮಾರ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದೆ. ಅದಕ್ಕಾಗಿ 2 ಬಾರಿ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದಿರುವ ಸುಶೀಲ್ ಶರಣಾಗಲು ಬಯಸಿದ್ದಾರೆ ಎನ್ನಲಾಗಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಸಾಗರ್ ದೆಹಲಿ ಛತ್ರಸಾಲ ಸ್ಟೇಡಿಯಂನಲ್ಲಿ ತರಬೇತಿಗೆ ತೆರಳಿದ್ದಾಗ ಗಲಾಟೆಯಲ್ಲಿ ಹಲ್ಲೆಗೊಳಗಾಗಿ ಮೃತಪಟ್ಟಿದ್ದರು. ಅವರ ಜೊತೆಗಾರರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಸುಶೀಲ್​ ಕುಮಾರ್​ ಹೆಸರು ಪ್ರಧಾನವಾಗಿ ಕೇಳಿಬಂದಿತ್ತು.ಘಟನೆ ನಡೆದಾಗಿನಿಂದ ಸುಶೀಲ್ ನಾಪತ್ತೆಯಾಗಿದ್ದರು.
ಇತ್ತ ಪೊಲೀಸರ ಜಾಮೀನು ರಹಿತ ವಾರೆಂಟ್​ ಮನವಿಗೆ ಹೈಕೋರ್ಟ್​ ಕೂಡ ಸಮ್ಮತಿ ಸೂಚಿಸಿದ್ದು, ಅಲ್ಲದೇ ಸುಶೀಲ್ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ರೂ ಬಹುಮಾನ ಘೋಷಿಸಿದ್ದಾರೆ.
ಇತ್ತ ಸುಶೀಲ್ ಮಾವ, ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ವಿಚಾರಣೆ ನಡೆಸಲಾಗಿದೆ. ದೆಹಲಿ ಸರ್ಕಾರಕ್ಕೂ ಪೊಲೀಸರು ಆರೋಪಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪತ್ರ ಬರೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss