ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದಲ್ಲಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ರಾಜೀನಾಮೆ ನೀಡಿದ್ದು, ಇದೀಗ ಮಧ್ಯಂತರ ಅಸ್ತಿತ್ವಕ್ಕೆ ಬಂದಿದೆ. ಈ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ .
ಪ್ರಧಾನಿ ಹುದ್ದೆಗೆ ಸ್ಪರ್ಧಿಗಳೆಂದು ಪರಿಗಣಿಸಲಾದ ಕುಲ್ಮನ್ ಘಿಸಿಂಗ್ ಮತ್ತು ಸುಡಾನ್ ಗುರುಂಗ್ ಸೇರಿದಂತೆ ಅನೇಕ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಅವರು ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿಗಳ ನಿವಾಸ ಶೀತಲ್ ನಿವಾಸ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು .ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಸುಶೀಲಾ ಕರ್ಕಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.