Tuesday, May 30, 2023

Latest Posts

ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಪ್ರವೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ದೆಹಲಿ ಬಿಜೆಪಿಯ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದು, ಈ ಮೂಲಕ ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಬಾನ್ಸುರಿ ಸ್ವರಾಜ್ ವಕೀಲ ವೃತ್ತಿಯಲ್ಲಿ 16 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಮತ್ತು ಬಾನ್ಸುರಿ ಈಗಾಗಲೇ ಕಾನೂನು ವಿಷಯಗಳಲ್ಲಿ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಾನ್ಸುರಿ ಸ್ವರಾಜ್ ಅವರನ್ನು ಕಾನೂನು ಕೋಶದ ಸಹ ಸಂಚಾಲಕರನ್ನಾಗಿ ನೇಮಿಸಿದ್ದಾರೆ.

ಸ್ವರಾಜ್ ಅವರ ನೇಮಕವು ತಕ್ಷಣದಿಂದ ಜಾರಿಗೆ ಬರಲಿದೆ ಮತ್ತು ಅವರು ಬಿಜೆಪಿಯನ್ನು ಬಲಪಡಿಸುತ್ತಾರೆ ಎಂದು ಆಶಿಸಿರುವುದಾಗಿ ಸಚ್‌ದೇವ ಹೇಳಿದ್ದಾರೆ.

ದೆಹಲಿ ಬಿಜೆಪಿಯ ಕಾನೂನು ವಿಭಾಗದ ಸಹ ಸಂಚಾಲಕರಾಗಿ ಪಕ್ಷಕ್ಕೆ ಹೆಚ್ಚು ಸಕ್ರಿಯವಾಗಿ ಸೇವೆ ಸಲ್ಲಿಸಲು ನನಗೆ ಔಪಚಾರಿಕವಾಗಿ ಅವಕಾಶ ನೀಡಲಾಗಿರುವುದಕ್ಕಾಗಿ ಬಾನ್ಸುರಿ ಸ್ವರಾಜ್‌, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಉನ್ನತ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!