ಜಮ್ಮು-ಕಾಶ್ಮೀರ: ಸುಧಾರಿತ ಸ್ಪೋಟಕ ಸಾಧನ ನಿಷ್ಕ್ರಿಯಗೊಳಿಸಿದ ಬಾಂಬ್‌ ಸ್ಕ್ವಾಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಭದ್ರತಾ ಪಡೆಗಳು ಸೋಮವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಫೋಟಕಗಳನ್ನು ಪತ್ತೆ ಹಚ್ಚಿ, ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿವೆ.

ಜಮ್ಮು ಮತ್ತು ಕಾಶ್ಮೀರದ ಪಟ್ಟಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಐಇಡಿ ಮಾದರಿಯ ವಸ್ತುವನ್ನು ಸೋಮವಾರ ಪತ್ತೆ ಹಚ್ಚಿವೆ. ಮುಂಜಾನೆ ರಾಷ್ಟ್ರೀಯ ಹೆದ್ದಾರಿಯ ಹಂಜಿವೀರಾದಲ್ಲಿ ಬ್ಯಾಗ್‌ನಲ್ಲಿ ಶಂಕಿತ ಐಇಡಿ ಪತ್ತೆಯಾಗಿದ್ದು, ಶ್ರೀನಗರ-ಬಾರಾಮುಲ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಮುನ್ನೆಚ್ಚರಿಕೆ ಕ್ರಮವಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಶಂಕಿತ ಐಇಡಿಯನ್ನು ನಿಷ್ಕ್ರಿಯಗೊಳಿಸಲು ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಬಾಂಬ್ ನಿಷ್ಕ್ರಿಯ ದಳ ಸ್ಫೋಟಕಗಳನ್ನು ಸಮೀಪದ ಹೊಲಗಳಿಗೆ ಕೊಂಡೊಯ್ದು ಯಾವುದೇ ಹಾನಿಯಾಗದಂತೆ ನಿಷ್ಕ್ರಿಯಗೊಳಿಸಿರುವುದಾಗಿ ಖಚಿತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!