ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಸಂಬಂಧ ಅನುಮಾನ ಹೊಂದಿದ್ದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಶಿವನಂದ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಗೀತಾ ಎಂದು ತಿಳಿದು ಬಂದಿದ್ದು, ಶಂಕರ್ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ.
ಬಳಿಕ ಅತ್ತೆಗೆ ಕೆರೆ ಮಾಡಿ ನಿಮ್ಮ ಮಗಳನ್ನು ಕೊಲೆ ಮಾಡಿದ್ದೇನೆ ಎಂದು ಶಂಕರ್ ಮಾಹಿತಿ ನೀಡಿದ್ದ ಎನ್ನಲಾಗಿದೆ. ಈ ನಡುವೆ ಶಂಕರ್ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ವಿಡಿಯೋಗಳು ಕೂಡ ಇದ್ದು, ನನ್ನ ಮಾನಮಾರ್ಯದೆ ಹಾಳಾಗುತ್ತಿದ್ದ ಹಿನ್ನಲೆಯಲ್ಲಿ ಈ ಕೆಲಸ ಮಾಡಿರುವೆ ಅಂತ ಹೇಳಿದ್ದ ಎನ್ನಲಾಗಿದೆ. ಇನ್ನೂ ಹಲವು ದಿನಗಳಿಂದ ಇಬ್ಬರ ನಡುವೆ ಜಗಳವಾಗುತಿತ್ತು ಎನ್ನಲಾಗಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಚಂದ್ರಲೇಔಟ್ ಪೋಲಿಸರು ಸ್ಥಳಕ್ಕೆ ಆಗಮಿಸಿ, ಶವವನ್ನು ಮರಣೋತ್ತರ ಪರೀಕ್ಷೆ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಆರೋಪಿ ಶಂಕರನನ್ನು ಬಂಧಿಸಿ ಮುಂದಿನ ವಿಚಾರಣೆ ನಡೆಸಿದ್ದಾರೆ.