ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಶಂಕಿತ ಐಸಿಸ್ ಉಗ್ರ ಶಹನ್‌ವಾಜ್ ಅಲಿಯಾಸ್ ಶಫಿ ಎಂಬಾತನನ್ನು ದೆಹಲಿಯ ವಿಶೇಷ ಪೊಲೀಸ್ ತಂಡ ಬಂಧಿಸಿದೆ.
ಈ ಹಿಂದೆಯೇ ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ ಎನ್‌ಐಎ ಮೂರು ಲಕ್ಷ ರೂಪಾಯಿ ಬಹುಮಾನವನ್ನು ಘೋಷಣೆ ಮಾಡಿತ್ತು. ಶಫಿ ಎಂಬಾತ ಇಂಜಿನಿಯರ್ ಆಗಿದ್ದು, ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಪುಣೆ ಪೊಲೀಸರಿಂದ ತಪ್ಪಿಸಿಕೊಂಡು ಆತ ದೆಹಲಿಯಲ್ಲಿ ವಾಸವಾಗಿದ್ದ, ಇದೀಗ ಪೊಲೀಸರು ಶಫಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.