ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಟನ್ ಊಟ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ನಡೆದಿದೆ. ಮೃತರನ್ನು ಭೀಮಣ್ಣ (60), ಈರಮ್ಮ (54), ಮಲ್ಲೇಶ್ (19) ಮತ್ತು ಪಾರ್ವತಿ (17) ಎಂದು ಗುರುತಿಸಲಾಗಿದೆ.
ಮಲ್ಲಮ್ಮ ಸ್ಥಿತಿ ಚಿಂತಾಜನಕವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಟನ್ ಅಡುಗೆ ಮಾಡುವಾಗ ಊಟದಲ್ಲಿ ಹಲ್ಲಿ ಬಿದ್ದಿದೆ ಎಂದು ನಂಬಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.