ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನಲ್ಲಿ ನಡೆದಿದ್ದಂತ ಕುಕ್ಕಲ್ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರೀಕ್ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದನು. ಇದೀಗ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ.
ಮಂಗಳೂರು ಕುಕ್ಕಲ್ ಬಾಂಬ್ ಸ್ಟೋಟಕದ ರೂವಾರಿ, ಶಂಕಿತ ಉಗ್ರ ತಾರೀಕ್ ಸ್ಪೋಟಕದ ನಂತ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಡಯುತ್ತಿದ್ದನು. ಇಂದು ಚಿಕಿತ್ಸೆಯ ನಂತ್ರ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದನು.
ಶಂಕಿತ ಉಗ್ರ ಶಾರೀಕ್ ಅನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಈ ಕುರಿತಂತೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಎನ್‌ಐಎ ವಿಶೇಷ ನ್ಯಾಯಾಲಯವು, ಶಂಕಿತ ಉಗ್ರ ತಾರಿಕ್ ಅನ್ನು ಮಾರ್ಚ್ 15ರವರೆಗೆ ಎನ್‌ಐಎ ಅಧಿಕಾರಿಗಳ ವಶಕ್ಕೆ ನೀಡಿ ಆದೇಶಿಸಿದೆ.