Saturday, December 9, 2023

Latest Posts

FOLLOWUP| ಬೆಂಗಳೂರಿನಲ್ಲಿ ಸುಮಾರು ಹತ್ತು ಕಡೆ ಬ್ಲಾಸ್ಟ್‌ಗೆ ಪ್ಲಾನ್ ಮಾಡಿದ್ದ ಶಂಕಿತ ಉಗ್ರರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಲಭ್ಯವಾಗುತ್ತಲೇ ಇದೆ. ಒಟ್ಟಾರೆ ಏಳು ಶಂಕಿತ ಉಗ್ರರು ಬೆಂಗಳೂರು ಸಿಟಿಯಲ್ಲಿ ಬ್ಲಾಸ್ಟ್‌ಗೆ ಪ್ಲಾನ್ ಮಾಡಿದ್ದು, ಐವರು ಪೊಲೀಸರ ಕೈಗೆ ಸಿಕ್ಕಿದ್ದಾರೆ. ಇನ್ನು ಬ್ಲಾಸ್ಟ್‌ನ ಮಾಸ್ಟರ್‌ಮೈಂಡ್ ಜುನೇದ್ ತಪ್ಪಿಸಿಕೊಂಡಿದ್ದು, ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಬೆಂಗಳೂರಿನ ಹತ್ತು ಸಾರ್ವಜನಿಕ ಸ್ಥಳದಲ್ಲಿ ಬ್ಲಾಸ್ಟ್‌ಗೆ ಈ ಶಂಕಿತ ಉಗ್ರರು ಎಲ್ಲಾ ತಯಾರಿ ಮಾಡಿಕೊಂಡಿದ್ದರು. ಇನ್ನೇನು ಎರಡೇ ದಿನದಲ್ಲಿ ಬ್ಲಾಸ್ಟ್‌ಗೆ ಪ್ಲಾನ್ ಮಾಡಿದ್ದು, ಪೊಲೀಸರಿಂದ ದೊಡ್ಡ ಅನಾಹುತ ತಪ್ಪಿದೆ. ಶಂಕಿತ ಉಗ್ರರೆಲ್ಲರೂ ಬೆಂಗಳೂರಿನ ಸ್ಥಳೀಯ ನಿವಾಸಿಗಳೇ ಆಗಿದ್ದಾರೆ. ಉಗ್ರರ ಜೊತೆ ಇವರು ಸಂಪರ್ಕದಲ್ಲಿದ್ದು, ಬೆಂಗಳೂರಿನ ಎಲ್ಲೆಲ್ಲಿ ಬ್ಲಾಸ್ಟ್ ಮಾಡಬೇಕು ಎನ್ನುವ ಮಾಹಿತಿ ಪಡೆದಿದ್ದರು.

ಬಂಧಿತ ಉಗ್ರರಿಂದ ಪೊಲೀಸರು ಏಳು ಪಿಸ್ತೂಲ್, 45 ಮದ್ದುಗುಂಡು, ಹನ್ನೆರಡು ಬೇಸಿಕ್ ಮೊಬೈಲ್ ಫೋನ್, ಡ್ರ್ಯಾಗರ್, ವಾಕಿ ಟಾಕಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!