Wednesday, August 17, 2022

Latest Posts

ಉತ್ತರಪ್ರದೇಶದಲ್ಲಿ ಬಿಜೆಪಿ ನಾಯಕ ಅನುಮಾನಾಸ್ಪದ ಕೊಲೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಉತ್ತರಪ್ರದೇಶದ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಆತ್ಮಾರಾಮ್​ ತೋಮರ್​ ಅವರನ್ನು ಕೊಲೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಉತ್ತರಪ್ರದೇಶದ ಭಾಗಪತ್ ತೋಮರ್ ವಾಸಿಸುತ್ತಿದ್ದು,​​ ತೋಮರ್ ಮೃತದೇಹವು ಅವರ ನಿವಾಸದಲ್ಲಿಯೇ ಪತ್ತೆಯಾಗಿದೆ.  ಟವೆಲ್ ನಿಂದ ಸುತ್ತಿ ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ಭಾಗಪತ್​ ಎಸ್ಪಿ ನೀರಜ್​ ಜಾದೌನ್​ ಮಾಹಿತಿ ನೀಡಿದ್ದಾರೆ.

ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಇಬ್ಬರು ವ್ಯಕ್ತಿಗಳು ಮನೆಯನ್ನು ಪ್ರವೇಶಿಸಿರುವುದು ಕಂಡುಬಂದಿದೆ. ಸಮಗ್ರ ತನಿಖೆ  ನಡೆಸಲಾಗುತ್ತಿದೆ ಎಂದು ನೀರಜ್ ಹೇಳಿದ್ದಾರೆ.

ಈ ಬಗ್ಗೆ ಆತ್ಮಾರಾಮ್​ ತೋಮರ್ ಅವರ ಪುತ್ರ ಸತ್ಯಪ್ರತಾಪ್ ಪ್ರತಿಕ್ರಿಯಿಸಿದ್ದು, ತಂದೆ ಮತ್ತು ಮಾವನ ನಡುವೆ ಹಣದ ವಿಚಾರವಾಗಿ ಜಗಳವಾಗುತ್ತಿತ್ತು. ಇದೇ ಕಾರಣಕ್ಕೆ ಕೊಲೆಯಾಗಿರಬಹುದು ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!