June 11, 2026
Thursday, June 11, 2026
spot_img

ಕೇರಳದ ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಶಂಕಿತ ಪ್ರಕರಣ: ಆರೋಗ್ಯ ಇಲಾಖೆ ಅಲರ್ಟ್, ರಾಜ್ಯಾದ್ಯಂತ ಕಟ್ಟೆಚ್ಚರ

ಹೊಸದಿಗಂತ ಡಿಜಿಟಲ್ ಡೆಸ್ಕ್:


ಕೇರಳದ ಕೋಯಿಕ್ಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ ವೈರಸ್ ಸೋಂಕು ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ)ಗೆ ಕಳುಹಿಸಲಾಗಿದ್ದು, ಪರೀಕ್ಷಾ ವರದಿ ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಫೆರೋಕ್ ಮೂಲದ ಉದ್ಯಮಿಯಾಗಿರುವ ಈ ವ್ಯಕ್ತಿ ಮೊದಲಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಬುಧವಾರ ಕೋಯಿಕ್ಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಅವರಿಗೆ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.


ರೋಗಿಯ ಸಂಪರ್ಕಕ್ಕೆ ಬಂದಿರುವವರನ್ನು ಪತ್ತೆಹಚ್ಚಿ ಪ್ರತ್ಯೇಕಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಅವರ ಸಂಪರ್ಕದಲ್ಲಿದ್ದ ಆರೋಗ್ಯ ಸಿಬ್ಬಂದಿ ಹಾಗೂ ಇತರರಿಗೆ ಕ್ವಾರಂಟೈನ್‌ನಲ್ಲಿ ಇರಲು ಸೂಚಿಸಲಾಗಿದೆ.


ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳು ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗಿದ್ದು, ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಸಾರ್ವಜನಿಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯ ಸಚಿವ ಕೆ. ಮುರಳೀಧರನ್ ಮನವಿ ಮಾಡಿದ್ದಾರೆ.


ನಿಫಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಅಗತ್ಯವಿರುವ ಎಲ್ಲ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !