ಮುಂಬೈನಲ್ಲಿದ್ದಾನೆ ಶಂಕಿತ ಉಗ್ರ: ಪುಣೆ ಪೊಲೀಸ್ ಗೆ ಬಂತು ಅಮೆರಿಕದಿಂದ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬೈನಲ್ಲಿ ಶಂಕಿತ ಉಗ್ರನೊಬ್ಬ ಕಾರ್ಯಾಚರಿಸುತ್ತಿರುವುದಾಗಿ ಪುಣೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ತಡರಾತ್ರಿ ಅಮೆರಿಕದಿಂದ ಕರೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಡರಾತ್ರಿ 1ರ ಸುಮಾರಿಗೆ ಕರೆ ಬಂದಿದೆ. ಕರೆ ಮಾಡಿದವರು ನಿರ್ದಿಷ್ಟವಾಗಿ ಒಬ್ಬ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದ್ದು, ಆತನನ್ನು ತಪಾಸಣೆ ನಡೆಸುವಂತೆ ಹೇಳಿದ್ದಾರೆ.

ತಕ್ಷಣವೇ ಮುಂಬೈ ಪೊಲೀಸರಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪುಣೆ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮುಂಬೈನಲ್ಲಿದ್ದಾನೆ ಎನ್ನಲಾದ ಶಂಕಿತನ ಬಗ್ಗೆ ಅಮೆರಿಕದಿಂದ ಕರೆ ಬಂದಿರುವುದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಕರೆ ಮಾಡಿದ ವ್ಯಕ್ತಿ ಹಾಗೂ ಆತ ಆರೋಪ ಮಾಡಿರುವ ವ್ಯಕ್ತಿ ಇಬ್ಬರ ಸ್ಥಳಗಳನ್ನು ಪತ್ತೆ ಹಚ್ಚಲಾಗುವುದು ಎಂದು ವಿವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!