October 18, 2026
Sunday, October 18, 2026
spot_img

ಕಲಬುರಗಿಯಲ್ಲಿ ಶಂಕಿತ ಉಗ್ರ ವಶಕ್ಕೆ: ಐಬಿ–ಪೊಲೀಸರ ಜಂಟಿ ಕಾರ್ಯಾಚರಣೆ, ಪ್ರಿಯಾಂಕ್ ಖರ್ಗೆ ಮಾಹಿತಿ

ಹೊಸದಿಗಂತ ವರದಿ ಕಲಬುರಗಿ:

ಲಷ್ಕರ್-ಇ-ತಯ್ಯಬಾ ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಒಬ್ಬನನ್ನು ಶಂಕಿತನಾಗಿ ವಶಕ್ಕೆ ಪಡೆಯಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳ ಮೂಲಕ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ವಿಚಾರ ಖಚಿತವಾಗಿದೆ. ಇಬ್ಬರ ಪೈಕಿ ಒಬ್ಬನ ಸಂಪರ್ಕದ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಬೇರೆ ರಾಜ್ಯದಿಂದ ಕಲಬುರಗಿಗೆ ಆಗಮಿಸಿರುವ ಯುವಕರಾಗಿದ್ದು, ಅವರ ಚಟುವಟಿಕೆಗಳ ಕುರಿತು ತನಿಖೆ ಪ್ರಗತಿಯಲ್ಲಿದೆ. ಕೇಂದ್ರ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿಯಾಗಿ ಮಾಹಿತಿ ಕಲೆಹಾಕುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ವಿವರಗಳು ತಿಳಿದುಬರಲಿವೆ ಎಂದರು.

ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆಗಳ ಕುರಿತು ಗುಪ್ತಚರ ಇಲಾಖೆ ಹಾಗೂ ಪೊಲೀಸರು ನಿಗಾ ವಹಿಸಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

Must Read