March 29, 2026
Sunday, March 29, 2026
spot_img

ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಗೃಹ ಸಚಿವ ಪರಮೇಶ್ವರ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಲಷ್ಕರ್‌ ಎ ತೈಬಾ (LeT) ಉಗ್ರ ಸಂಘಟನೆಯ ಶಂಕಿತರನ್ನು ದೆಹಲಿಯಲ್ಲಿ ಬಂಧಿಸಲಾಗಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲೂ ಆಂತರಿಕವಾಗಿ ಅಲರ್ಟ್ ಮಾಡಿದ್ದೇವೆ. ನಮ್ಮ ಐಎಸ್‌ಡಿ ವಿಭಾಗಕ್ಕೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದೇವೆ ಎಂದರು.

ದೆಹಲಿ ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶದವರು ಕೂಡ ಇದ್ದಾರೆ. ಹಾಗಾಗಿ ರಾಜ್ಯದಲ್ಲೂ ಬಾಂಗ್ಲಾವಾಸಿಗಳ ಪತ್ತೆ ಮಾಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !