ಹೊಸದಿಗಂತ ವರದಿ ಹಾಸನ :
ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯ ಕತ್ತು ಸೀಳಿ ಬರ್ಬರ ಹತ್ಯೆ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ, ಹಿರಿಯೂರು ಕೂಡಿಗೆ ಬಳಿ ನಡೆದಿದೆ.
ಮಂಜುಳಾ (38) ಕೊಲೆಯಾದ ಮಹಿಳೆ. ಯೋಗೇಶ್ ಅಚಾರ್ ಪತ್ನಿಯನ್ನೇ ಹತ್ಯೆಗೈದ ಪತಿ.
ಕೊಲೆ ಮಾಡಿ ಮನೆಗೆ ಬೀಗ ಹಾಕಿ ಎಸ್ಕೇಪ್ ಆಗಿರುವ ಯೋಗೇಶ್ ಅಚಾರ್ ಆರೋಪಿ.
ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪತ್ನಿಯನ್ನೇ ಹತ್ಯೆಗೈದ ಪತಿ ಯೋಗೇಶ್ ಅಚಾರ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.